ಅಪಘಾತ ಸಮಗ್ರ ಸುದ್ದಿ

ಬೆಳ್ಳಂ ಬೆಳಿಗ್ಗೆ ಬೂದಿಗೆರೆ ಬೈಪಾಸ್ ನಲ್ಲಿ ಅಪಘಾತ!

Share It

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕ್ಯಾಂಟರ್ ತಿರುವಿನಲ್ಲಿ ಪಲ್ಟಿ ಹೊಡೆದಿದೆ.

ದೇವನಹಳ್ಳಿ ಯಿಂದ ಬೂದಿಗೆರೆ ಮಾರ್ಗವಾಗಿ ಕಾಡುಗೋಡಿ ಕಡೆ ತೆರಳುತ್ತಿದ್ದ ಕ್ಯಾಂಟರ್ ಇದಾಗಿದ್ದು, ಚಾಲಕ ಮಾತ್ರ ಈ ಕ್ಯಾಂಟರ್ ನಲ್ಲಿದ್ದ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

ಕ್ಯಾಂಟರ್ ಪಲ್ಟಿಯಾಗುತ್ತಿದ್ದಂತೆ ಬೂದಿಗೆರೆ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಚಾಲಕನನ್ನು ಕ್ಯಾಂಟರ್ ನಿಂದ ಹೊರಗೆಳೆದು ರಕ್ಷಣೆ ಮಾಡಿದ್ದಾರೆ.

You cannot copy content of this page