ಸಮಗ್ರ ಸುದ್ದಿ

ಇಂದು ನಾಲ್ಕು ಜಿಲ್ಲೆಗಳಲ್ಲಿ ಮಳೆ !

Share It

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೂಲ್​ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಹವಮಾನ ಇಲಾಖೆ ರೆಡ್​, ಎಲ್ಲೋ  ಹಾಗು ಆರೆಂಜ್​ ಅಲರ್ಟ್​ ಸಹ ಘೋಷಣೆ ಮಾಡಿತ್ತು.

ಇನ್ನು ಇವತ್ತು ಸಹ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಮಳೆ ಸಾಧ್ಯತೆಯಿದೆ ಎಂದು ಹವಾಮಾನ  ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ರಾಜ್ಯದ ದಕ್ಷಿಣ ಕನ್ನಡ, ಬಳ್ಳಾರಿ , ಕೊಡಗು ಹಾಗು ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ನೀಡಿದೆ. ಜೊತೆಗೆ ಉಳಿದ ಜಿಲ್ಲೆಗಳಲ್ಲಿಯೂ ಸಹ ಸಾಧಾರಣ ಮಳೆಯಾಗಲಿದ್ದು, ಎಲ್ಲೋ ಅಲರ್ಟ್​ ಘೋಷಸಿರುವ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

You cannot copy content of this page