
ಬೆಂಗಳೂರಿನಲ್ಲಿ ಕಸದ ಲಾರಿಯಲ್ಲಿ ಶವ ಪತ್ತೆಯಾಗಿದ್ದ ಘಟನೆ ಮಾಸುವ ಮುನ್ನವೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಶವ ಇದೇ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಬಳಿ ಘಟನೆ ನಡೆದಿದೆ. ಬಾಶೆಟ್ಟಿಹಳ್ಳಿ ಬಳಿಯ ಬೃಹತ್ ಒಳಚರಂಡಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಗೋಣಿ ಚೀಲದಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.