ಧರ್ಮಸ್ಥಳ ವ್ಯಾಪ್ತಿಯಲ್ಲಿ ಸಾವು ಪ್ರಕರಣ ಸಿಎಂ ಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ : ಪತ್ರದಲ್ಲೇನಿದೆ!?

ಧರ್ಮಸ್ಥಳ ವ್ಯಾಪ್ತಿಯ ಕಾಡುಗಳಲ್ಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿರವರು ಪತ್ರ ಬರೆದಿದ್ದಾರೆ. ಜೊತೆಗೆ ದಕ್ಷಿಣ ಕನ್ನಡ ಎಸ್ ಪಿ ರವರಿಗೂ ಸಹ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರದಲ್ಲಿ ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಕೋರಿದ್ದಾರೆ. ಅಂತೆಯೇ ಕಳೆದ 20 ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ನಡೆದಿರುವ ಮಹಿಳೆಯರಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಕೋರಿದ್ದಾರೆ.
