ಅಪಘಾತ ಅಪರಾಧ ಆರೋಗ್ಯ ಕಾನೂನು ಕೃಷಿ ರಾಜಕೀಯ ರಾಷ್ಟ್ರೀಯ ಸುದ್ದಿ ಶಿಕ್ಷಣ ಸಮಗ್ರ ಸುದ್ದಿ ಸಿನಿಮಾ

10 ಹೆಚ್.ಪಿ.ವರೆಗೆ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರ

Share It

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆಜೆ.ಜಾರ್ಜ್ ಅವರು ಬುಧವಾರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸೆಸ್ಕ್ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೃಷಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ರೈತರಿಗೆ ಎಷ್ಟು ವಿದ್ಯುತ್ ಪೂರೈಸಲಾಗುತ್ತಿದೆ ಮತ್ತು ಎಷ್ಟು ಸಂಪರ್ಕಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್’ಪಿ ವರೆಗೆ ಉಚಿತ ವಿದ್ಯುತ್ ಮುಂದುವರೆಯುವುದರ ಜೊತೆಗೆ 7 ಗಂಟೆ ಸಮಪರ್ಕ ವಿದ್ಯುತ್ ಕೂಡ ಪೂರೈಕೆಯಾಗಲಿದೆ. ಇದರಲ್ಲಿ ಅನುಮಾನ ಬೇಡ. ಮುಖ್ಯಮಂತ್ರಿಗಳು ಇತ್ತೀಚೆಗೆ ಹಾಡಿಗಳಿಗೆ ಭೇಟಿ ನೀಡಿದ ಬಳಿಕ ಅವುಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ. 600 ಹೆಚ್ಚು ಹಾಡಿ ಮನೆಗಳಿಗೆ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿರುವ ಎಲ್ಲಾ ಅಕ್ರಮ ಕೃಷಿ ಪಂಪ್‌ ಸೆಟ್‌ಗಳನ್ನು 3 ತಿಂಗಳಲ್ಲಿ ಸಕ್ರಮಗೊಳಿಸಲಾಗುವುದು. ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು 4.5 ಲಕ್ಷ ಅಕ್ರಮ ಕೃಷಿ ಪಂಪ್‌ ಸೆಟ್‌ಗಳಿದ್ದು, ಅದರಲ್ಲಿ ಈಗಾಗಲೇ 2.5 ಲಕ್ಷ ಕೃಷಿ ಪಂಪ್‌ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ. ಬಾಕಿ ಇರುವ 2 ಲಕ್ಷ ಕೃಷಿ ಪಂಪ್‌ ಸೆಟ್‌ಗಳನ್ನು ಶೀಘ್ರದಲ್ಲಿಯೇ ಸಕ್ರಮಗೊಳಿಸಲಾಗುವುದು ಎಂದರು.

Leave a Reply

Your email address will not be published. Required fields are marked *

You cannot copy content of this page