ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು.
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಅನೇಕ ರಾಜಕೀಯ ಪಕ್ಷಗಳು ಒಳ ಮೀಸಲಾತಿ ಮಾಡುತ್ತೇವೆ ಎಂದು ದಿಕ್ಕು ತಪ್ಪಿಸುತ್ತಿವೆ. ಅಂತೆಯೇ ರಾಜ್ಯ ಕಾಂಗ್ರೆಸ್ ಸರಕಾರವು ಮಾಡುವ ಅನುಮಾನವಿದೆ ಎಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಹ ವಾಗ್ದಾಳಿ ನಡೆಸಿದರು.

ರಾಜ್ಯಾದ್ಯಂತ ಬಂದ್ ಗೆ ಕರೆ!
ಆಗಸ್ಟ್ 1 ರಿಂದ 15 ರೊಳಗೆ ರಾಜ್ಯ ಸರಕಾರ ಒಳ ಮೀಸಲಾತಿ ಜಾರಿ ಮಾಡದೆ ಹೋದರೆ ರಾಜ್ಯ ಮಾದಿಗ ಒಕ್ಕೂಟಗಳಿಂದ ರಾಜ್ಯ ಬಂದ್ ಗೆ ಕರೆ ನೀಡಲಾಗುತ್ತದೆ. ಜೊತೆಗೆ ಸರಕಾರದ ವಿರುದ್ಧ ಅಸಹಕಾರ ಚಳುವಳಿ ಮಾಡಿ ಮಾದಿಗರ ಶಕ್ತಿಯನ್ನು ಸರಕಾರಕ್ಕೆ ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.