
ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೈವೇಯಲ್ಲಿ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದು, ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗೌಡಹಳ್ಳಿ ಬಳಿ ಘಟನೆ ನಡೆದಿದ್ದು, ಸಾಧನಾ ಸಮಾವೇಶ ಮುಗಿಸಿ ಹಿಂತಿರುಗುವಾಗ ಅವಘಡ ಸಂಭವಿಸಿದೆ.