ಸಮಗ್ರ ಸುದ್ದಿ

VIP ಸಂಚಾರ ವೇಳೆ ಸೈರನ್ ನಿಷೇಧ!

Share It

ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ವಿಐಪಿ ಸಂಚಾರದ ವೇಳೆ ಬಳಸುವ ಸೈರನ್ ನ್ನು ನಿಷೇಧ ಮಾಡಿ ಡಿಜಿಐಜಿಪಿ ಡಾ.ಸಲೀಂ ಆದೇಶ ಹೊರಡಿಸಿದ್ದಾರೆ.

ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಇದರಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆಯಿದೆ. ಜೊತೆಗೆ ಹಠಾತ್ತಾಗಿ ಸೈರನ್ ಬಳಕೆಯಿಂದ ಇತರೆ ವಾಹನ ಚಾಲಕರಿಗೆ ತೊಂದರೆಯಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದ್ದಾರೆ.

ಇನ್ನು ವಿಐಪಿ ಸಂಚಾರದ ವೇಳೆ ತುರ್ತು ಚಲವಲನದ ಅವಶ್ಯಕತೆಗಳಿಗೆ ವೈರ್ ಲೆಸ್ ಕಮ್ಯುನಿಕೇಶನ್ ಮುಖಾಂತರ ಮಾಹಿತಿ ವಿನಿಮಯ ಮಾಡಬೇಕು. ಸೈರನ್ ಗಳು ಕೇವಲ ಆ್ಯಂಬುಲೆನ್ಸ್, ಪೊಲೀಸ್ ಹಾಗೂ ಅಗ್ನಿಶಾಮಕ ವಾಹನಗಳು ತುರ್ತ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು ಎಂದು ತಿಳಿಸಿದ್ದಾರೆ.

You cannot copy content of this page