
ಐದು ದಿನಗಳ ಹಿಂದಷ್ಟೆ ಬಿಎಂಟಿಸಿ ಕಂಡಕ್ಟರ್ ಬಸ್ ಚಲಿಸಲು ಹೋಗಿ ಪುಟ್ ಪಾತ್ ಮೇಲೆ ಚಲಿಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಪೀಣ್ಯ 2 ನೇ ಹಂತದಲ್ಲಿ ನಡೆದಿತ್ತು. ಘಟನೆಯಲ್ಲಿ ಸುಮಾ ಎಂಬ 25 ವರ್ಷದ ಯುವತಿ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಇಂದು ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಕೆ.ಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಾರ್ಗ ಸಂಖ್ಯೆ 213 ಆರ್, ಡಿಪೋ -20 ಕ್ಕೆ ಸೇರಿದ ಬಸ್ ನಂಬರ್ ಕೆಎ-01-ಎಫ್-4168 ಬಸ್ ಇದಾಗಿದೆ.