
ಇಬ್ಬರು ವಸೂಲಿ ಕಾನ್ಸ್‌ಟೇಬಲ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಚಿತ್ರದುರ್ಗದ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ತರಬೇತಿ ಶಾಲೆಯಲ್ಲಿ ಭೋದಕರಾಗಿ ಕೆಲಸ ಮಾಡುತ್ತಿದ್ದ ಮಹಾಲಿಂಗಪ್ಪ ಮತ್ತು ರವಿನಾಯ್ಕ ಹಫ್ತಾ ವಸೂಲಿ ಮಾಡುತ್ತಿದ್ದ ಕಾನ್ಸ್‌ಟೇಬಲ್ ಗಳು. ಇಲ್ಲಿನ ಪ್ರಶಿಕ್ಷಣಾರ್ಥಿಗಳ ಬಳಿ ವಾಹನಕ್ಕೆ ಸೌಂಡ್ ಸಿಸ್ಟಮ್, ಬರ್ತಡೇ ಸೆಲೆಬ್ರೇಷನ್ ಸೇರಿದಂತೆ ಆ ಖರ್ಚು ಈ ಖರ್ಚು ಅಂತ ಹೇಳಿ ಲಕ್ಷಾಂತರ ರೂಪಾಯಿ ವಸೂಲಿ ಮಾಡ್ತಿದ್ದರಂತೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಇಬ್ಬರು ಕಾನ್ಸ್‌ಟೇಬಲ್ ಗಳ ಮೇಲೆ ಎಫ್ ಐಆರ್ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.