
ಹೌದು, ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಇರುವ ಕಿಲ್ಲಿಂಗ್ ಸ್ಟಾರ್ ಅಭಿಮಾನಿಗಳಿಗೆ ಇಂದು ಡವ ಡವ ಶುರುವಾಗಿದೆ. ಎಲ್ಲಾ ಅಭಿಮಾನಿಗಳ ಚಿತ್ತ ಸುಪ್ರೀಂ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಿರುವ ಬೇಲ್ ಮುಂದುವರೆಸಬೇಕೋ ಅಥವಾ ರದ್ದು ಮಾಡಬೇಕೋ ಎಂಬ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ನೀಡಲಿದೆ. ಪ್ರಕರಣದಲ್ಲಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ರದ್ದು ಮಾಡುವಂತೆ ರಾಜ್ಯ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ಸುಪ್ರೀಂ ದ್ವಿಸದಸ್ಯ ಪೀಠ ಹೈಕೋರ್ಟ್ ನೀಡಿದ್ದ ಜಾಮೀನಿನ ಬಗ್ಗೆ ಗರಂ ಆಗಿತ್ತು. ಕಾರಣ ಇಂದಿನ ಸುಪ್ರೀಂ ತೀರ್ಪು ದರ್ಶನ್ ಗೆ ಜೈಲಾ? ಬೇಲಾ? ಎಂಬುವುದನ್ನು ನಿರ್ಧರಿಸುವ ಮಹತ್ವದ ಆದೇಶವಾಗಿದೆ.