
ಹೌದು, ಒಂದು ಲಕ್ಷ ರೂಪಾಯಿ ಲಂಚ ತಗೊಂಡು ಸಲೀಸಾಗಿ ಜೇಬಿಗಿಳಿಸುತ್ತಿದ್ದ ಇನ್ಸ್ಪೆಕ್ಟರ್ ನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಗಿ ಹಿಡಿದಿದೆ. ಪೊಲೀಸ್ ಇನ್ಸ್ಪೆಕ್ಟರ್ ಮಾತ್ರವಲ್ಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನ್ನು ಸಹ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಅಂದಹಾಗೆ ಈ ಘಟನೆ ನಡೆದಿರುವುದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜಶೇಖರ್ ಹಾಗೂ ಸಬ್ ಇನ್ಸ್ಪೆಕ್ಟರ್ ರುಮನ್ ಪಾಷಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಪೊಲೀಸರು.
ಗಂಡ – ಹೆಂಡತಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಇಮ್ರಾನ್ ಎಂಬಾತನಿಂದ ಒಂದು ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರಂತೆ. ಇಮ್ರಾನ್ ಒಂದು ಲಕ್ಷ ಹಣ ತಂದು ಕೊಟ್ಟಾಗ ಇನ್ಸ್ಪೆಕ್ಟರ್ ಜೇಬಿಗಿಳಿಸುವ ವೇಳೆಗೆ ಸರಿಯಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಅನ್ನು ಬಂಧಿಸಿ ವಶಕ್ಕೆಪಡೆದಿದ್ದಾರೆ.