
ಸುಮಾರು 50 ವರ್ಷ ವಯಸ್ಸಿನ ವೃದ್ಧ ಮಹಿಳೆಯ ಶವ ಕೆರೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಈ ಸಂಬಂಧ ವಿಜಯಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ವಿಜಯಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆರೆಯಲ್ಲಿ ಇಂದು ಬೆಳಿಗ್ಗೆ ಮೃತದೇಹ ತೇಲಾಡುತ್ತಿದ್ದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.