
2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ, ಕೆ.ಎ.ಎಸ್, ಕೆಪಿಎಸ್ಸಿ ಗ್ರೂಪ್ -ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://seva sindhu.karnataka.gov.in/Sevasindhu/DepartmentServices ಅಥವಾ https://dom.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆಗಸ್ಟ್ 26 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಪ್ರಸ್ತುತ ಸೆಪ್ಟೆಂಬರ್ 6 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಸೂಚನೆಗಳು
ಅಭ್ಯರ್ಥಿಯು ತರಬೇತಿಗೆ ಸಲ್ಲಿಸುವ ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿ ಫಲಿತಾಂಶ ಪ್ರಕಟವಾಗಿರಬೇಕು.
ಯು.ಪಿ.ಎಸ್.ಸಿ, ಕೆ.ಎ.ಎಸ್, ಕೆಪಿಎಸ್ಸಿ ಗ್ರೂಪ್ -ಸಿ, ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ರಿಂದ 35 ವರ್ಷ ಹಾಗೂ ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ರಿಂದ 30 ವರ್ಷ ಒಳಗಿನವರಾಗಿರಬೇಕು.
ಅಭ್ಯರ್ಥಿಯು ಈ ಹಿಂದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಐ.ಎ.ಎಸ್ ಮತ್ತು ಕೆ.ಎ.ಎಸ್ ಹಾಗೂ ಇತರೆ ಕೋರ್ಸ್ ಗಳಿಗೆ ಆಯ್ಕೆಯಾಗಿ ಕೋಚಿಂಗ್ ಪಡೆದಿದ್ದರೆ, ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಯು.ಪಿ.ಎಸ್.ಸಿ, ಕೆ.ಎ.ಎಸ್, 10 ತಿಂಗಳ ತರಬೇತಿ ಅವಧಿಯಾಗಿದ್ದು ವಸತಿ ಸಹಿತ ತರಬೇತಿ ನೀಡಲಾಗುವುದು ಮತ್ತು ಕೆಪಿಎಸ್ಸಿ ಗ್ರೂಪ್ -ಸಿ, 90 ದಿನಗಳ ವಸತಿಯುತ ತರಬೇತಿ ನೀಡಲಾಗುವುದು
ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ವಸತಿ ರಹಿತ 90 ದಿನಗಳ ತರಬೇತಿಯಾಗಿದ್ದು, ಪ್ರತಿ ಅಭ್ಯರ್ಥಿಗೆ ಮಾಹೆಯಾನ 6000 ರೂ ನೀಡಲಾಗುವುದು.
ಇಲಾಖಾ ವೆಬ್ಸೈಟ್ ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿ ಅಧಿಕೃತ ಮತ್ತು ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
