
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಬುರುಡುಗುಂಟೆ ಗ್ರಾಮದ ಬಳಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮತ್ತು ಇಬ್ಬರು ಸವಾರರು ಸಾವನ್ನಪ್ಪಿದ್ದು, ಮತ್ತೊಬ್ಬ ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು ಬುರುಡುಗುಂಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶಾಲಾ ವಾಹನದಲ್ಲಿದ್ದ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಮೃತರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಲಕಲನೇರ್ಪು ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಕಾರಣ ಮೃತರ ಸಂಖ್ಯೆ ಏರಿಕೆಯಾಗಿದೆ. ಬುರುಡುಗುಂಟೆ ಗ್ರಾಮ ಮತ್ತು ದಿಬ್ಬೂರಹಳ್ಳಿ ಗ್ರಾಮದಲ್ಲೂ ಆ್ಯಂಬುಲೆನ್ಸ್ ಇಲ್ಲದಿರುವುದು ಸುತ್ತಮುತ್ತಲಿನ ಹತ್ತು ಹಲವು ಗ್ರಾಮಗಳ ಜನತೆ ಸಂಕಷ್ಟ ಎದುರಿಸುವಂತಾಗಿದೆ.