
ಕರ್ನಾಟಕ ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಇಂದು ಸಹ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಸಹ ಘೋಷಿಸಿದೆ.
ಇನ್ನು ಜೂ.11 ರಂದು ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಸೇರಿದಂತೆ ಇನ್ನುಳಿದ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಇನ್ನುಳಿದ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.

ಉಳಿದಂತೆ ಜೂ.13 ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಿದ್ದು, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.