ಸಮಗ್ರ ಸುದ್ದಿ

ಸಚಿವರ ಬೆಂಬಲಿಗರಿಗೆ ಮಾತ್ರ ಯೋಜನೆಗಳು: ಮುನಿಯಪ್ಪ ವಿರುದ್ಧ ಮಹಿಳೆಯರ ಆಕ್ರೋಶ!

Share It

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಸಚಿವರ ಸ್ವಕ್ಷೇತ್ರದಲ್ಲಿಯೇ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕೇವಲ ಸಚಿವರ ಬೆಂಬಲಿಗರಿಗೆ ಮಾತ್ರ ಯೋಜನೆಗಳು ಕೊಡ್ತಿದ್ದಾರೆ. ಎಲ್ಲಾ ಯೋಜನೆಗಳು ಅವರಿಗೇ ಕೊಟ್ಟರೆ ನಾವು ಎಲ್ಲಿಗೆ ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಯಲಿಯೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ತುಂಬಿದ ಸಭೆಯಲ್ಲಿಯೇ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಸಾಲು ಸಾಲು ಅರ್ಜಿಗಳನ್ನು ತಂದು ಸಚಿವರಿಗೆ ನೀಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.

ಆಕ್ರೋಶಗೊಂಡಿದ್ದ ಗ್ರಾಮಸ್ಥರನ್ನು ಸಮಾಧಾನಪಡಿಸಿದ ಸಚಿವ ಕೆ.ಹೆಚ್.ಮುನಿಯಪ್ಪ ಸಮಸ್ಯೆಗಳ ಶೀಘ್ರ ಪರಿಹರಿಸುವ ಭರವಸೆ ನೀಡಿದರು. 

You cannot copy content of this page