
ಬೆಳ್ಳಂ ಬೆಳಿಗ್ಗೆ ಹಿಟ್ ಅಂಡ್ ರನ್ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ಅಪಘಾತ ಸಂಭವಿಸಿದೆ.

ಚಿಕ್ಕತಿಮ್ಮನಹಳ್ಳಿ ಗ್ರಾಮದ ನಿವಾಸಿಗಳಾದ ನಂದನ್ ಕುಮಾರ್(22) ಮತ್ತು ರವಿಕುಮಾರ್(24) ಮೃತ ದುರ್ದೈವಿಗಳಾಗಿದ್ದಾರೆ. ದೊಡ್ಡಬಳ್ಳಾಪುರ ನಗರಕ್ಕೆ ಕೆಲಸಕ್ಕೆ ಬರುವಾಗ ದುರ್ಘಟನೆ ನಡೆದಿದ್ದು, ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ತನಿಖೆ ಮುಂದುವರೆಸಿದ್ದಾರೆ.