
ಯಲಹಂಕ ಕನ್ನಡ ಜನಪದ ಹಬ್ಬ ಮತ್ತು ಕಾಟನ್ ಡೆಕ್ಸ್ಟ್ರಾ ಅಂತರ-ಕಾಲೇಜು ಉತ್ಸವವನ್ನು ಬುಧವಾರ ಯಲಹಂಕದ ಬಿಷಪ್ ಕಾಟನ್ ಅಕಾಡೆಮಿ ಆಫ್ ಪ್ರೊಫೆಷನಲ್ ಮ್ಯಾನೇಜ್ಮೆಂಟ್‌ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕರ್ನಾಟಕದ ಶ್ರೀಮಂತ ಕಲೆ ಮತ್ತು ಜನಪದ ಪರಂಪರೆ ಮತ್ತು ವಿದ್ಯಾರ್ಥಿಗಳ ವಿವಿಧ ಪ್ರತಿಭೆಗಳನ್ನು ಪ್ರದರ್ಶನದ ಉದ್ದೇಶದಿಂದ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಧ್ವಜಾರೋಹಣವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಹಾಗೂ ಪ್ರಸಿದ್ಧ ಲೇಖಕರಾದ ಶ್ರೀ ಎಲ್. ಎನ್. ಮುಕುಂದ ರಾಜ್ ಅವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಜನಪದ ಪರಂಪರೆಯನ್ನು ಉಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಎಸ್ ಮನೋನ್ಮಣಿ, ವಿಭಾಗಾಧ್ಯಕ್ಷರು ಮತ್ತು ಪ್ರೊಫೆಸರ್, ಬಿಷಪ್ ಕಾಟನ್ ಮಹಿಳಾ ಕ್ರಿಶ್ಚಿಯನ್ ಕಾಲೇಜು ಅವರು ಹಾಜರಿದ್ದರು. ನಂತರ ಮಾತನಾಡಿ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಮೆಚ್ಚಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ ಎಂಬುದನ್ನು ತಮ್ಮ ಭಾಷಣದಲ್ಲಿ ವಿವರಿಸಿದರು.
ಉತ್ಸವದ ಬಳಿಕದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕದ ಜನಪದ ವೈಭವವನ್ನು ಜೀವಂತಿಕೆಯನ್ನು ಪ್ರದರ್ಶಿಸಲಾಯಿತು. ವಿಶೇಷವಾಗಿ
ಡೊಳ್ಳು ಕುಣಿತ, ಜನಪದ ವಾದ್ಯಗಳಾದ ನಗಾರಿ, ತಮಟೆ, ನೃತ್ಯ ಸೇರಿದಂತೆ ಅನೇಕ ಜನಪದ ಕಲಾರೂಪಗಳನ್ನು ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶಿಸಿದರು ಇನ್ನು ವಿದ್ಯಾರ್ಥಿಗಳ ಕಲಾ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಸೊಬಗು ತಂದವು.