
ಸೆಲ್ಪ್ ಆಕ್ಸಿಡೆಂಟ್ ನಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮೂಲದ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಯಲಹಂಕದ ನ್ಯಾಯಾಂಗ ಬಡಾವಣೆ ರಸ್ತೆಯಲ್ಲಿ ನಡೆದಿದೆ. ನೆನ್ನೆ ರಾತ್ರಿ 10. 45 ರ ಸುಮಾರಿಗೆ ಘಟನೆ ನಡೆದಿದ್ದು, ಶಿಡ್ಲಘಟ್ಟ ಮೂಲದ ಆನಂದ್ ಮೃತ ದುರ್ದೈವಿಯಾಗಿದ್ದಾರೆ.

ಅಪಘಾತದಲ್ಲಿ ಬೈಕ್ ಸವಾರ ಆನಂದ್ ತಲೆಗೆ ತೀವ್ರ ಗಾಯವಾಗಿದ್ದು,
ಜಕ್ಕೂರು ಏರೋ ಡ್ರಮ್ ರಾಷ್ಟ್ರೀಯ ಹೆದ್ದಾರಿಯಿಂದ ನ್ಯಾಯಾಂಗ ಬಡಾವಣೆಗೆ ಸಂಪರ್ಕಿಸುವ ರೈಲ್ವೇ ಕೆಳ ಸೇತುವೆಯಲ್ಲಿ ಆಂಬ್ಯುಲೆನ್ಸ್ ಬರಲು ಸಾಧ್ಯವಾಗಲಿಲ್ಲ. ಈ ವೇಳೆ ಕಾರಿನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ಯಲಹಂಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.