
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪರ್ಯಾಯ ರಸ್ತೆ ಬೂದಿಗೆರೆ ಬಳಿ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಕ್ಯಾಬ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನ ಚಲಿಸುತ್ತಿದ್ದ ಬೂದಿಗೆರೆ ಯುವಕ ಮುಕ್ತಿಯಾರ್ ನ ಕೈ ಮುರಿದಿದೆ. ಸದ್ಯಕ್ಕೆ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರ್ ನ ಮುಂಭಾಗದ ಬಂಪರ್ ಡ್ಯಾಮೇಜ್ ಆಗಿದೆ.
ಬೂದಿಗೆರೆ ಬೈಪಾಸ್ ನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು ಪದೇ ಪದೇ ಇದೇ ರೀತಿಯ ಅಪಘಾತಗಳು ಸಂಭವಿಸುತ್ತಿದ್ದು ವಾಹನ ಸವಾರರು ಸಾವು ನೋವುಗಳನ್ನು ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ 8 ವರ್ಷ ಕಳೆದರು ಕೈಗೆತ್ತಿಕೊಂಡ ಕಾಮಗಾರಿಯನ್ನು ಪೂರ್ಣಗೊಳಿಸದಿರುವುದು ಅಪಘಾತಕ್ಕೆ ಮತ್ತೊಂದೆ ಕಾರಣವಾಗಿದೆ.

ಅವೈಜ್ಞಾನಿಕ ರಸ್ತೆ ಸರಿಪಡಿಸಬೇಕು ಹಾಗೂ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಬೂದಿಗೆರೆ ಗ್ರಾಮದ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಲವು ಬಾರಿ ರಸ್ತೆ ಬಂದ್ ಮಾಡಿ ಹೋರಾಟ ಮಾಡಿದರೂ ಸಹ ದಪ್ಪ ಚರ್ಮದ KRDCL ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇನ್ನು ಈ ಬಗ್ಗೆ ಸರಕಾರದ ಗಮನಕ್ಕೆ ತರಬೇಕಾದ ಅಧಿಕಾರಿಗಳು ಸಹ ಗಪ್ ಚುಪ್ ಆಗಿ ಕುಳಿತಿದ್ದಾರೆ.