
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಹೈದರಾಬಾದ್ ಹೈವೇನಲ್ಲಿ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರ ದೇಹಗಳು ಛಿದ್ರ ಛಿದ್ರವಾಗಿದೆ. ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಅಪಘಾತ ಸಹದಿಂದ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಯ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಇಷ್ಟೆಲ್ಲಾ ನಡೆದರೂ ಸಹ ಅಪಘಾತದ ಸ್ಥಳಕ್ಕೆ ಪೊಲೀಸರು ಸರಿಯಾದ ಸಮಯಕ್ಕೆ ಬಂದು ಸಂಚಾರ ದಟ್ಟಣೆ ನಿಯಂತ್ರಣ ಮಾಡುವ ಕೆಲಸ ಮಾಡಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಪಘಾತ ನಡೆದ ಸ್ಥಳ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದೆ ಎನ್ನಲಾಗುತ್ತಿದೆ ಆದರೂ ಸಹ ಸಾರ್ವಜನಿಕರು ಹಲವು ಭಾರಿ ಪೊಲೀಸರಿಗೆ ಕರೆ ಮಾಡಿದರು ಯಾರೊಬ್ಬರೂ ಸೂಕ್ತ ಪ್ರತಿಕ್ರಿಯೆ ನೀಡಲಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.