ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಯ್ಯಪ್ಪ ಕಚೇರಿಯಲ್ಲಿ ಬಯ್ಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ಪದಗ್ರಹಣ ಮಾಡಿದರು.
ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ 6.45 ಕೋಟಿ ರೂ ಅಂದಾಜಿ ವೆಚ್ಚದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ನೂತನ ಕಚೇರಿ ನಿರ್ಮಾಣವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಕಚೇರಿಯನ್ನು ಉದ್ಘಾಟನೆ ಮಾಡಿದ್ದರು.
ವಿ.ಶಾಂತಕುಮಾರ್ ಗೆ ದೇವನಹಳ್ಳಿ ತಾಲ್ಲೂಕು ಹಿರಿಯ ಕಾಂಗ್ರೆಸ್ ಮುಖಂಡರುಗಳು ಪದಗ್ರಹಣದ ವೇಳೆ ಸಾಥ್ ನೀಡಿ ಶುಭ ಕೋರಿದರು.