ಬ್ರಹ್ಮರಥೋತ್ಸವಕ್ಕೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಹಾಗೂ ರಾಮಲಿಂಗಾರೆಡ್ಡಿ ಅವರಿಂದ ಚಾಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಆಹಾರ ನಾಗರಿಕ ಸರಬರಾಜು,ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ, ಎಸಿ ದುರ್ಗ ಶ್ರೀ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.