ಅಪರಾಧ

ಏಕ ಕಾಲಕ್ಕೆ 10 ತಾಲ್ಲೂಕು ಕಚೇರಿಗಳ ಮೇಲೆ ಲೋಕಾ ರೇಡ್! ಯಾವ್ಯಾವುದು ಗೊತ್ತಾ?

Share It

ಇಂದು ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ್ದಾರೆ. ರಾಜ್ಯದ 10 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತಿಪಟೂರು, ತುರುವೇಗೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲ್ಲೂಕು ಕಚೇರಿಗಳ ಮೇಲೆ 50 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ್ ನೇತೃತ್ವದ 10 ಇನ್ಸ್ಪೆಕ್ಟರ್ ಗಳ ತಂಡದಿಂದ ಈ ದಾಳಿ ನಡೆದಿದ್ದು, ತಾಲ್ಲೂಕು ಕಚೇರಿಯಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೊರ ಹೋಗದಂತೆ ನಿರ್ಬಂಧಿಸಲಾಗಿದೆ.

You cannot copy content of this page