
ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದರೂ ಸಹ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಭಾಗಕ್ಕೆ ಜನಸಾಗರ ಹರಿದು ಬರುತ್ತಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಸುಮಾರು 1300 ಕ್ಕೂ ಹೆಚ್ಚು ವಾಹನಗಳು ಜಮಾವಣೆಯಾಗಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವಂತಾಗಿದೆ.
ಇನ್ನು ತಪ್ಪಲಿನಲ್ಲಿ ಗಾಳಿ ಮಳೆಗೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದಿದೆ. ಕಾರು ಪಲ್ಟಿ ಹೊಡೆದ ಕೂಡಲೇ ಹಿಂದಿನಿಂದ ಬರುತ್ತಿದ್ದ ಕಾರಿನವರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಕಾರನಲ್ಲಿದ್ದ ಐವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.