ಸಮಗ್ರ ಸುದ್ದಿ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ !

Share It

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಕಚೇರಿಗೆ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಾಗೂ ರೈತರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿಸಿ 1200 ದಿನಗಳಿಂದ ಹೋರಾಟ ನಡೆಯುತ್ತಿದ್ದರು ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಾರಣ ಜೂನ್ 25 ರಂದು ಸಾವಿರಾರು ಸಂಖ್ಯೆಯಲ್ಲಿ ರೈತರು ದೇವನಹಳ್ಳಿ ಚಲೋ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ತಹಸೀಲ್ದಾರ್ ಕಚೇರಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ರೈತರು ಮುತ್ತಿಗೆ ಎಚ್ಚರಿಕೆ ನೀಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ದೇವನಹಳ್ಳಿ ಪೊಲೀಸರು ದೇವನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಬೆಂಗಳೂರು ನಗರ ಕಮೀಷನರ್ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸುವಂತಿದ್ದರೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ನಡೆಸಬೇಕು. ಬೇರೆ ಭಾಗದಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ಸೂಚಿಸಿದ್ದಾರೆ.

You cannot copy content of this page